ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 15ನೇ ಪಟ್ಟಿ ಬಿಡುಗಡೆಯಾಗಿದ್ದು, ಸಂಸದೆ ಪೂನಂ ಮಹಾಜನ್ಗೆ 26/11 ಮುಂಬೈ ದಾಳಿಯ ಉಗ್ರ ಅಜ್ಜಲ್ ಕಸಬ್ನನ್ನು ಗಲ್ಲಿಗೇರಿಸುವಂತೆ ಮಾಡಲು ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್ ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ. ಉಜ್ವಲ್ ನಿಕಮ್ ದೇಶದ ಅತ್ಯಂತ ಪ್ರಸಿದ್ಧ ಸರ್ಕಾರಿ ವಕೀಲರಲ್ಲಿ ಒಬ್ಬರಾಗಿದ್ದರು. ಅವರು ಭಯೋತ್ಪಾದಕ ಅಜ್ವಲ್ ಕಸಬ್ನನ್ನು ಗಲ್ಲಿಗೇರಿಸಲು ಸಂಬಂಧಪಟ್ಟಂತೆ ವಾದ ಮಂಡಿಸಿದ್ದು, 1993 ರ ಸರಣಿ ಬಾಂಬ್ ಸ್ಫೋಟ, ಗುಲ್ಕನ್ ಕುಮಾರ್ ಹತ್ಯೆ ಪ್ರಕರಣ ಮತ್ತು ಪ್ರಮೋದ್ ಮಹಾಜನ್ ಹತ್ಯೆಯಂಥ ಉನ್ನತ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.
ದೆಹಲಿ : ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ದಿ. ಪ್ರಮೋದ ಮಹಾಜನ್ ಪುತ್ರಿ ಪೂನಂ ಅವರ ಹೆಸರು ಕೈಬಿಟ್ಟ ಬಿಜೆಪಿ, 26/11 ದಾಳಿ ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿದ್ದ ಉಜ್ವಲ್ ನಿಕ್ಕಂ ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ಘೋಷಿಸಿದೆ.
ಮುಂಬೈ ಮೇಲೆ 2011ರಲ್ಲಿ ನಡೆದ ದಾಳಿಯ ಪ್ರಕರಣದಲ್ಲಿ ನಿಕ್ಕಂ ಅವರು ಸರ್ಕಾರಿ ವಕೀಲರಾಗಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು. ಮತ್ತೊಂದೆಡೆ ಪೂನಂ ಮಹಾಜನ್ ಅವರು 2014ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಅವರು ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷರೂ ಹೌದು.
ಆದರೆ ಪಕ್ಷದ ಸಂಘಟನಾ ವಲಯದಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ದಾಖಲಿಸಿ, ಪೂನಂ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.
ಆದರೆ, ಮಹಾಜನ್ ಅವರ ಹೆಸರನ್ನು ಕೈಬಿಡುವ ಯೋಜನೆ ಪಕ್ಷಕ್ಕೆ ಮೊದಲೇ ಇತ್ತು. ಸೂಕ್ತ ಅಭ್ಯರ್ಥಿಯ ಹುಡುಕಾಟ ನಡೆಯುತ್ತಿತ್ತು. ನಿಕ್ಕಂ ಅವರು ಒಪ್ಪಿದ್ದರಿಂದ ಪೂನಂ ಹೆಸರು ಕೈಬಿಡಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇದೇ ಕ್ಷೇತ್ರಕ್ಕೆ ಧಾರಾವಿ ಶಾಸಕಿ ವರ್ಷಾ ಗಾಯಕ್ವಾಡ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಲೋಕಸಭಾ ಚುನಾವಣೆಯ 5ನೇ ಹಂತದಲ್ಲಿ ಮೇ 20ರಂದು ಇಲ್ಲಿ ಮತದಾನ ನಡೆಯಲಿದೆ.