ಬೆಂಗಳೂರು: ಎಂಟೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಕಾಯುತ್ತಿರುವ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 8 ರಂದು ಹೊರಬೀಳುವ ಸಾಧ್ಯತೆ ಇದೆ. ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ವಿದ್ಯಾರ್ಥಿಗಳು ಪಡೆದಿರುವ ಅಂಕಗಳ ಗಣಕೀಕರಣ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಳ್ಳಲು ನಾಲೈದು ದಿನಗಳು ಬೇಕಾಗಬಹುದು. ಎಲ್ಲ ಅಂದುಕೊಂಡಂತೆ ನಡೆದರೆ ಮೇ 8ರಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಚಿಂತನೆ ನಡೆಸಿದೆ. ಒಂದು ವೇಳೆ ಗಣಕೀಕರಣ ಕಾರ್ಯ ವಿಳಂಬವಾದರೆ ಅಥವಾ ಸಮ ಯಕ್ಕೆ ಸರಿಯಾಗಿ ಮುಗಿಯದೆ ಹೋದರೆ ಒಂದೆರಡು ದಿನ ತಡವಾಗಬಹುದು ಎಂದು ಮೂಲಗಳು ತಿಳಿಸಿವೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರವರೆಗೆ 2750 ಕೇಂದ್ರಗಳಲ್ಲಿ ನಡೆದಿತ್ತು. ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.