ಬೆಂಗಳೂರು: ರಜೆ ಸಮಯದಲ್ಲಿಯೂ ಪ್ರೌಢಶಾಲಾ ಶಿಕ್ಷಕರಿಗೆ ವಿಶೇಷ ಬೋಧನಾ ತರಗತಿಗಳನ್ನು ಮುಂದೂಡಿ ರಾಜ್ಯ ಸರಕಾರದ ಆದೇಶ ಹೊರಡಿಸಿದೆ.
2024ರ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆ ಸುವ ವಿಶೇಷ ಪರಿಹಾರ ಬೋಧನೆ ತರಗತಿ ಗಳನ್ನು ನಡೆಸಲು ಮೇ 15ರಿಂದ ಶಾಲೆಗೆ ಬರಲು ಇಲಾಖೆ ಸೂಚನೆ ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಇಎಲ್ ನೀಡುವುದಾಗಿ ಹೇಳಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಮರು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಷಯ ಬೋಧನಾ ಶಿಕ್ಷಕ ರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಮೇ 15ರಿಂದ ಜೂ. 5ರವರೆಗೆ ಬದಲಿಗೆ, ಮೇ 29ರಿಂದ ಜೂ.13ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.