ಬೆಂಗಳೂರು : ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ವಿವೇಕಾನಂದ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವಿನ ಉಡುಗೊರೆ ಸಿಕ್ಕಿದೆ.ವಿವೇಕಾನಂದ ಅವರಿಗೆ 3258 ಮುನ್ನಡೆ ಸಿಕ್ಕಿದೆ. ಅವರಿಗೆ ಒಟ್ಟು 10823 ಮತ ದೊರೆತಿದ್ದು ಕಾಂಗ್ರೆಸ್ಸಿನ ಅಭ್ಯರ್ಥಿ ಮರಿತಿಬ್ಬೇಗೌಡರು 6201 ಮತ ಪಡೆದುಕೊಂಡಿದ್ದಾರೆ. ಅವರು ಈ ಹಿಂದೆ ಜೆಡಿಎಸ್ ಹಾಗೂ ಬಿಜೆಪಿಯಿಂದ ಮೇಲ್ಮನೆಗೆ ಆಯ್ಕೆಯಾಗಿದ್ದರು. ವಾಟಾಳ್ ನಾಗರಾಜ್ ಅವರು 84 ಮತ ಗಳಿಸಿದ್ದಾರೆ.
ಮತ ಎಣಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಸೋಲಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿ ವಿವೇಕಾನಂದ ಮೊದಲ ಗೆಲುವು ಸಾಧಿಸಿದ್ದಾರೆ. ಅವರು 4622 ಮತಗಳಿಂದ ಗೆದ್ದಿದ್ದಾರೆ.
ಮರಿತಿಬ್ಬೇಗೌಡರು ಈ ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಗೆದ್ದಿದ್ದರು. ಕಳೆದ ಬಾರಿ ಜೆಡಿಎಸ್ ನಿಂದ ಗೆದ್ದು ನಂತರದ ದಿನಗಳಲ್ಲಿ ಕಾಂಗ್ರೆಸ್ಗೆ ಬಂದಿದ್ದರು. ಇದೀಗ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಗೆಲುವಿನ ನಾಗಾಲೋಟಕ್ಕೆ ಮೈತ್ರಿ ಅಭ್ಯರ್ಥಿ ವಿವೇಕಾನಂದ ಬ್ರೇಕ್ ಹಾಕಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ 1396 ಮತಗಳಿಂದ ಮುನ್ನಡೆ ಸಾಧಿಸಿದ್ದರು. ನಂತರ 2ನೇ ಸುತ್ತಿನಲ್ಲಿ 3258 ಮತಗಳ ಅಂತರ ಕಾಯ್ದುಕೊಂಡ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರಿಗೆ ಅಂತಿಮವಾಗಿ 10823 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರು 6201 ಮತಗಳನ್ನು ಪಡೆದಿದ್ದಾರೆ. ಹೀಗಾಗಿ 4622 ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾಟಾಳ್ ನಾಗರಾಜ್ ಗೆ 84 ಮತಗಳು ಮಾತ್ರ ಸಿಕ್ಕಿದೆ.