ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ (93) ಅವರು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು.ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು.
ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದು, ಕುವೆಂಪುನಗರದ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ.
ಮೈಸೂರು: ಪ್ರಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಬುಧವಾರ ನಿಧನರಾದರು.
ವಿಶ್ವ ಮನ್ನಣೆ ಗಳಿಸಿದ್ದ ಸಂಗೀತಲೋಕದ ಧ್ರುವತಾರೆ ಕಳೆದ ವರ್ಷ ಮೈಸೂರು ದಸರಾ ಸಮಯದಲ್ಲಿ ಸಾಕಷ್ಟು ಸುದ್ದಿಯಾಗಿದ್ದರು. ಮೈಸೂರು ದಸರಾ ಸಮಯದಲ್ಲಿ ಕಾರ್ಯಕ್ರಮ ನೀಡಲು ತಮ್ಮಿಂದಲೇ ಸರ್ಕಾರದ ಅಧಿಕಾರಿಗಳು ಲಂಚ ಕೇಳಿದ್ದರು ಎನ್ನುವ ಆರೋಪ ಮಾಡುವ ಮೂಲಕ ರಾಜೀವ್ ತಾರಾನಾಥ್ ಸುದ್ದಿಯಾಗಿದ್ದರು. 91 ವರ್ಷದ ರಾಜೀವ್ ತಾರಾನಾಥ್ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಿಧನರಾಗಿದ್ದಾರೆ. ಸುಮಾರು 15 ದಿನಗಳಿಂದ ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವು ಕಂಡಿದ್ದಾರೆ.
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದರಾಗಿದ್ದ ರಾಜೀವ್ ತಾರಾನಾಥ್ ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿದಂತೆ ಹತ್ತಾರು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.