ಬೆಂಗಳೂರು/ಕಾರ್ಕಳ: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು.
ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು.