ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಡಾಲರ್ಸ್ ಕಾಲೋನಿ ಮನೆಯಿಂದಲೇ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನ ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಇಲ್ಲಿಂದ ನೇರವಾಗಿ ಇಡಿ ಅಧಿಕಾರಿಗಳು ಶಾಂತಿನಗರದ ಕಚೇರಿಗೆ ಕರೆದೊಯ್ಯುತ್ತಿದ್ದಾರೆ.
40 ಗಂಟೆ ತಪಾಸಣೆ ಬಳಿಕ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ ವಶಕ್ಕೆ ಪಡೆದಿದೆ. ಹೆಚ್ಚಿನ ವಿಚಾರಣೆಗಾಗಿ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನ ವಶಕ್ಕೆ ಪಡೆದಿದೆ. ರೇಡ್ ವೇಳೆ ಸರಿಯಾದ ಉತ್ತರ ನೀಡದ ಹಿನ್ನಲೆಯಲ್ಲಿ ನಾಗೇಂದ್ರ ಅವರನ್ನ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ವಿಚಾರಣೆಗೆ ಬಳಿಕ ನಾಗೇಂದ್ರ ಅವರನ್ನ ಬಂಧಿಸುವ ಸಾಧ್ಯತೆ ಇದೆ.