ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 15)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರವಾರ ಅಂಕೋಲಾ, ಹೊನ್ನಾವರ, ಕುಮಟಾ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ (ಜುಲೈ 15 ರಂದು) ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲೂ ಶಾಲಾ ಕಾಲೇಜಗಳಿಗೆ ರಜೆ ಘೋಷಣೆ : ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸೋಮವಾರ (ಜುಲೈ 15ರಂದು) ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ರಂಗಧಾಮಪ್ಪ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ತಿಳಿಸಿದ್ದಾರೆ.