- *ಉತ್ತರ ಕರ್ನಾಟಕದಲ್ಲೇ ಮೊದಲ ರೊಬೋಟಿಕ ಆಸ್ಪತ್ರೆಯ ಹೆಗ್ಗಳಿಕೆ
- *ಶಸ್ತ್ರಚಿಕಿತ್ಸೆ ಮಾಹಿತಿ ಬಿಚ್ಚಿಟ್ಟ ಎಂಡಿ. ಕರ್ನಲ್ ಡಾ. ದಯಾನಂದ
ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೊಬೊಟಿಕ್ ತಂತ್ರಜ್ಞಾನವನ್ನು – ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಅಳವಡಿಸಿಕೊಂಡು ಹೊಸ ಮೈಲುಗಲ್ಲು ಸಾಧಿಸಿದೆ. ಈ ಹೊಸ ತಂತ್ರಜ್ಞಾನದ ಲಾಭವನ್ನು ರೋಗಿಗಳು ಪಡೆಯಬೇಕೆಂದು ಕೆ.ಎಲ್.ಇ ಆಸ್ಪತ್ರೆಯ ಎಂಡಿ. ಕರ್ನಲ್ ಡಾ. ದಯಾನಂದ ತಿಳಿಸಿದರು.
ನಗರದ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಕರೆದಿದ್ದ ಪತ್ರಿಕೆಗಾರರ ಸಭೆಯಲ್ಲಿ ಮಾತನಾಡುತ್ತ, ಭಾರತದಲ್ಲಿಯೇ ತಯಾರಿಸಿದ ರೊಬೊಟಿಕ್ ಇದಾಗಿದ್ದು, ಅತ್ಯಂತ ಎಸ್ಎಸ್ಐ ತಂತಜಾನ ಸರ್ಜಿಕಲ್ ನಿಖರತೆಯಿಂದ ಕೂಡಿದ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಿದೆ.
ಈಗಾಗಲೇ ಈ ತಂತ್ರಜ್ಞಾನದಿಂದ ಇಬ್ಬರು ಕ್ಯಾನ್ಸರ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಗಿದೆ. ಅನ್ನನಾಳ ಕ್ಯಾನ್ಸರನಿಂದ ಬಳಲುತ್ತಿದ್ದ 62 ಮತ್ತು 70 ವರ್ಷದ ರೋಗಿಗಳಿಗೆ ಸುಮಾರು 8 ಗಂಟೆಗಳ ಕಾಲ ಚಿಕಿತ್ಸೆಯೆ ನೆರವೇರಿಸಲಾಯಿತು ಎಂದು ತಿಳಿಸಿದರು. ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೊಬೊಟಿಕ್ ತಂತ್ರಜ್ಞಾನವನ್ನು – ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಅಳವಡಿಸಿಕೊಂಡು ಹೊಸ ಮೈಲುಗಲ್ಲು ಸಾಧಿಸಿದೆ. ಈ ಹೊಸ ತಂತ್ರಜ್ಞಾನದ ಲಾಭವನ್ನು ರೋಗಿಗಳು ಪಡೆಯಬೇಕೆಂದು ಕೆ.ಎಲ್.ಇ ಆಸ್ಪತ್ರೆಯ ಎಂಡಿ. ಕರ್ನಲ್ ಡಾ. ದಯಾನಂದ ತಿಳಿಸಿದರು.
ವೈದ್ಯವಿಜ್ಞಾನದ ತಂತ್ರಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಅದಕ್ಕೆ ತಕ್ಕಂತೆ ಆಸ್ಪತ್ರೆಗಳು ಕೂಡ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿವೆ. ವೈದ್ಯಕೀಯ ವಿಜ್ಞಾನದಲ್ಲಿ ನಿಖರವಾದ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲು – ರೊಬೊಟಿಕ್ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಿದೆ. ಈ ತಂತ್ರಜ್ಞಾನವನ್ನು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯಂ ಸಂಶೋಧನಾ ಕೇಂದ್ರದಲ್ಲಿ ಅಳವಡಿಸಲಾಗಿದೆ. ಅಲ್ಲದೇ ರೊಬೊಟನಿಂದ ಇಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.
ಕಳೆದ ಮೂರು ದಶಕಗಳ ಹಿಂದೆ ವೈದ್ಯವಿಜ್ಞಾನದ ತಂತ್ರಜ್ಞಾನಕ್ಕೆ ಪರಿಚಿತವಾದ ಇದು ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಶಸ್ತ್ರಚಿಕಿತ್ಸೆಯಲ್ಲಿ ಅದ್ಭುತ ಕೊಡುಗೆ ನೀಡುತ್ತ ನಿರಂತರವಾಗಿ ಅಭಿವೃದ್ಧಿ ಗೊಳ್ಳುತಿದೆ. ರೊಬೊಟಿಕ್ ವೈದ್ಯರು ಅತ್ಯಂತ ಕ್ಲಿಷ್ಟಕರವಾದ ಹಾಗೂ ಸಂಕೀರ್ಣತೆಯಿಂದ ಕೂಡಿದ, ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಲು ಸಹಕಾರಿಯಾಗಲಿದೆ.
ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸಾ ವಿಧಾನಗಳನ್ನು ನಿರ್ವಹಿಸುವುದು ಸೇರಿದಂತೆ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತದೆ. ರೊಬೊಟಿಕ್ ಸಹಕಾರದಿಂದ ಕ್ಯಾನ್ಸರನ ಶಸ್ತ್ರಚಿಕಿತ್ಸೆಯು ಪರಿಣಾಮಕಾರಿ ಎಂದು ಕಂಡು ಬಂದಿದೆ. ರೂ ಟಿಕ್ ಶಸ್ತ್ರಚಿಕಿತ್ಸೆಯು ಲ್ಯಾಪರೊ ಸ್ಕೊಪಿಕ್ ಮತ್ತು ತೆರದ ಶಸ್ತ್ರಚಿಕಿತ್ಸೆ ಎರಡಕ್ಕೂ ಸೈ ಎನಿಸಿಕೊಂಡಿದೆ.
ಕ್ಯಾನ್ಸರ ಶಸ್ತ್ರಚಿಕಿತ್ಸಕ ಡಾ. ಮಹೇಶ ಕಲ್ಲೋಳಿ, ಡಾ. ಕುಮಾರ ವಿಂಚುರಕರ ಹಾಗೂ ಡಾ. ದಿವಾಕರ, ಡಾ. ರಾಹುಲ್ ಕಿನವಾಡಕರ ,ಅರವಳಿಕೆ ತಜವೈದ್ಯರಾದ ಡಾ. ರಾಜೀಶ ಮಾನೆ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.