ಬೆಳಗಾವಿ : ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಕೋಹಳ್ಳಿ ಗ್ರಾಮದ ಸಂಗಪ್ಪ ರಾಮು ದೇವಕತೆ (58) ಎಂಬವರ ಶವ ಕಾರಿನಲ್ಲಿ ಪತ್ತೆಯಾಗಿದೆ. ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಈ ಪ್ರಕರಣ ಪತ್ತೆಯಾಗಿದೆ. ಮಹಾರಾಷ್ಟ್ರದ ನೋಂದಣಿ ಹೊಂದಿರುವ ಕಾರಿನಲ್ಲಿ ಇವರ ಶವವನ್ನು ವಿಜಯಪುರ ಜಿಲ್ಲಾಸ್ಪತ್ರೆ ಆವರಣಕ್ಕೆ ತಂದು ಇಟ್ಟು ಹೋಗಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.