ಬೆಳಗಾವಿ : ಬೆಳಗಾವಿ ತಾಲೂಕು ನಾವಗೆ ಬಳಿಯ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಆಕಸ್ಮಿಕ ಸಂಭವಿಸಿ ಸಾವು ನೋವುಗಳು ಉಂಟಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬುಧವಾರ ರಾತ್ರಿ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕಾರ್ಖಾನೆಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಲು ಕಾರಣ ಏನು ಎಂಬ ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂದೆ ಸೇರಿದಂತೆ ಇತರರು ಉಪಸ್ಥಿತರಿದ್ದರು.