ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.
ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಜೇಳಲಾಗುವುದಿಲ್ಲ. ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.
ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು.
*ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:*
ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.
*ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ*
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.
ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ
ಬೆಂಗಳೂರು:
“ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಸದಾಶಿವನಗರದ ನಿವಾಸದ ಬಳಿ ಬಿಜೆಪಿಯ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?” ಎಂದು ಕುಟುಕಿದರು.
*ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ*
“ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ” ಎಂದರು.
“ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು. ಆಗ ನಾವೇನು ಮಾತನಾಡಲಿಲ್ಲ. ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಟೀಕೆಗಳು ಸಾಯುತ್ತವೆ. ಅದಕ್ಕೆ ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ” ಎಂದು ಹೇಳಿದರು.
“ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷಾತ ವರದಿಯನ್ನು ನೀಡಲಿದ್ದಾರೆ” ಎಂದು ತಿಳಿಸಿದರು.
“ಆಲಮಟ್ಟಿ ತುಂಬಿ ತುಳುಕುತ್ತಿದೆ. ಮಂಡ್ಯ ಸೇರಿದಂತೆ ಇತರೆ ಗ್ರಾಮಾಂತರ ಭಾಗಗಳಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಉತ್ತಮ ಮಳೆಯಾಗಿ ತುಂಬವ ನಿರೀಕ್ಷೆ ಇದೆ” ಎಂದು ಹೇಳಿದರು.
*ತುಂಗಭದ್ರಾ ಅಣೆಕಟ್ಟು ಕ್ರಸ್ಟ್ಗೇಟ್ ವಿಚಾರ; ಪ್ರತಿಪಕ್ಷದವರ ಟೀಕೆಗಳು ಸತ್ತು ಹೋದವು, ಕೆಲಸ ಉಳಿದುಕೊಂಡಿತು: ಡಿಸಿಎಂ ಡಿ.ಕೆ.ಶಿವಕುಮಾರ್*
*ಬೆಂಗಳೂರು/ಕೊಪ್ಪಳ, ಆ. 21:*
“ತುಂಗಭದ್ರಾ ಅಣೆಕಟ್ಟು ಕ್ರಸ್ಟ್ ಗೇಟ್ ಅವಘಡ ವಿಚಾರವಾಗಿ ವಿರೊಧ ಪಕ್ಷಗಳು ಕೇವಲ ಟೀಕೆ ಮತ್ತು ರಾಜಕೀಯ ಮಾಡುತ್ತಿದ್ದವು. ಆದರೆ ನಮ್ಮ ಕೆಲಸಗಳು ಉಳಿದುಕೊಂಡಿತು, ಅವರ ಟೀಕೆಗಳು ಸತ್ತು ಹೋದವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಬೆಂಗಳೂರಿನ ಸದಾಶಿವ ನಗರದ ನಿವಾಸ ಹಾಗೂ ತದ ನಂತರ ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು “ನಮ್ಮ ತಂತ್ರಜ್ಞರು, ಅಧಿಕಾರಿಗಳು, ಇಂಜಿನಿಯರ್ ಗಳು, ಕಾರ್ಮಿಕರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಈ ಭಾಗದ ಶಾಸಕರು ಅವಘಡ ನಡೆದ ದಿನದಿಂದ ಒಂದು ರಾತ್ರಿಯೂ ನಿದ್ದೆ ಮಾಡದೆ ಕೆಲಸ ಮಾಡಿದ್ದಾರೆ. ದೇವರ, ಜನರ ಆಶೀರ್ವಾದದಿಂದ ಈ ಕೆಲಸ ನಡೆದಿದೆ. ನಮ್ಮ ರೈತರನ್ನು ನಾವು ಬದುಕಿಸಿದ್ದೇವೆ” ಎಂದರು.
*ನವಲಿ ಅಣೆಕಟ್ಟಿನ ಬಗ್ಗೆ ಸರ್ಕಾರದ ಆಲೋಚನೆ*
ತುಂಗಭದ್ರಾ ಅಣೆಕಟ್ಟಿನ ಆಯಸ್ಸು ಕಡಿಮೆಯಿದೆ ಎನ್ನುವ ಬಗ್ಗೆ ಕೇಳಿದಾಗ “ಯಾವ ಆಯಸ್ಸು ಕಡಿಮೆಯಿಲ್ಲ. ತುಂಗಭದ್ರಾ ಅಣೆಕಟ್ಟು ಕಟ್ಟುವಾಗಲೇ ಪ್ರತಿವರ್ಷ ಅರ್ಧ ಟಿಎಂಸಿಯಷ್ಟು ಹೂಳು ತುಂಬಿಕೊಳ್ಳುತ್ತದೆ ಎನ್ನುವ ವರದಿಯಿತ್ತು ಎಂದು ಎಂ.ಬಿ.ಪಾಟೀಲರು ಮೊದಲೇ ಹೇಳಿದ್ದರು. ಮುಂದಿನ ದಿನಗಳಲ್ಲಿ ಪ್ರವಾಸ ನಡೆಸಿ ನವಲಿ ಸಮತೋಲಿತ ಅಣೆಕಟ್ಟಿನ ವಿಚಾರವಾಗಿ ಕೆಲಸ ಮಾಡಲಾಗುವುದು. ಇದರ ಪ್ರಸ್ತಾಪವನ್ನು ಈಗಾಗಲೇ ಬಜೆಟ್ ಅಲ್ಲಿ ಸೇರಿಸಲಾಗಿದೆ” ಎಂದು ತಿಳಿಸಿದರು.
ಕ್ರಸ್ಟ್ ಗೇಟ್ ಗಳನ್ನು 45 ವರ್ಷಗಳಿಗೊಮ್ಮೆ ಬದಲಾಯಿಸಬೇಕು ಎನ್ನುವ ವರದಿಯಿದ್ದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದಾಗ “ನಾನು ತಂತ್ರಜ್ಞನಲ್ಲ. ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷಾತ ವರದಿಯನ್ನು ನೀಡಲಿದ್ದಾರೆ. ಅವರ ವರದಿಯ ಮೇಲೆ ಯಾವ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಆ ಕೆಲಸಗಳನ್ನು ಸರ್ಕಾರ ಮಾಡಲಿದೆ”ಎಂದು ತಿಳಿಸಿದರು.
*ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ*
“ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತೇವೆ. ಕೊಪ್ಪಳಕ್ಕೆ ವಿಮಾನ ಮಾರ್ಗದಲ್ಲಿ ಬರುವಾಗ ವೀಕ್ಷಣೆ ಮಾಡಿದೆವು. ಅಣೆಕಟ್ಟು ಶೀಘ್ರ ತುಂಬಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ನಾರಾಯಣ ಎಂಜಿನಿಯರಿಂಗ್, ಜಿಂದಾಲ್ ಮತ್ತು ಹಿಂದೂಸ್ಥಾನ್ ಇಂಜಿನಿಯರಿಂಗ್ ಈ ಮೂರು ಕಂಪೆನಿಗಳು ಮಾಡಿದ ಸಹಾಯದಿಂದ ಕೇವಲ ನಾಲ್ಕು ದಿನಗಳಲ್ಲಿ ಗೇಟ್ ದುರಸ್ತಿ ಮಾಡಲಾಯಿತು. ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಈ ಕೆಲಸವನ್ನು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ” ಎಂದು ಹೇಳಿದರು.