ಬೆಳಗಾವಿ:
ವಿಧಾನ ಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಮನಿ ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಹೆಬ್ಬಾಳಕರ್, ಆನಂದ ಮಾಮನಿ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ಅಪಾರ ಜನಪ್ರಿಯತೆ ಹೊಂದಿದ್ದರು. ನಮ್ಮ ಹರ್ಷ ಸಕ್ಕರೆ ಕಾರ್ಖಾನೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದರು. ನಮ್ಮೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ಅಕಾಲಿಕ ನಿಧನ ದುಃಖವನ್ನುಂಟುಮಾಡಿದೆ ಎಂದರು.
ಮಾಮನಿ ಅವರ ಅಕಾಲಿಕ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ತಾಯಿ, ಪತ್ನಿ, ಚಿಕ್ಕ ಮಕ್ಕಳು ಹಾಗೂ ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದರು.