ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಪ್ರಶ್ನೆ ಉದ್ಭವಿಸದು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಪ್ರಶ್ನೆ ಉದ್ಭವಿಸದು. ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಗುವ ರೇಸಿನಲ್ಲಿ ಯಾರು ಸಹಾ ಇಲ್ಲ ಎಂದು ಅವರು ಹೇಳಿದರು.
ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಕರ್ನಾಟಕದ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ತಂತ್ರ ಫಲಿಸದು ಎಂದು ಅವರು ಹೇಳಿದರು.