ಬೆಳಗಾವಿ: ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹುದ್ದೆಯಿಂದ ಮಹೇಶ ಕೋಣಿ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದಷ್ಟೇ ಬೆಳಗಾವಿ ಪ್ರವಾಸದಲ್ಲಿದ್ದರು. ಅಂದೇ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಿರುವುದು ಜನತೆಯಲ್ಲಿ ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕುವಂತೆ ಮಾಡಿದೆ. ಮುಂದಿನ ಸ್ಥಳ ನಿಯತ್ತಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಇವರಲ್ಲಿ ಕಾರ್ಯ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಜೊತೆಗೆ ಚಿಕ್ಕೋಡಿ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ಗಡಾದ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಡಾ.ಮಹೇಶ ಕೋಣಿ ಅವರಿಂದ ತೆರವಾದ ಹುದ್ದೆಗೆ ಪ್ರಭಾರವಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.