ದೆಹಲಿ :
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ ನ.30 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಮಂಗಳವಾರ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.
ನ್ಯಾಯಾಲಯದಲ್ಲಿ ವಾದ ಮಂಡನೆಗೆ ಸಕಲ ಸಿದ್ದತೆ ನಡೆದಿದೆ.
ಮಹಾರಾಷ್ಟ್ರ ರಾಜ್ಯದ ಕೆಲವು ಹಳ್ಳಿಗಳ ಜನ ಕರ್ನಾಟಕ ಸೇರಲು ಒಲವು ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಒಂದು ರಾಜ್ಯದಿಂದ ಇನ್ನೊಂದು ರಾಜ್ಯ ಸೇರಲು ಕೆಲವು ನಿಯಮಗಳಿವೆ. ಜತೆಗೆ ಜತ್ ತಾಲೂಕಿನ 42 ಗ್ರಾಮಗಳ ಸಮಸ್ಯೆ ಇಂದು ನಿನ್ನೆಯದಲ್ಲ. ಗಡಿನಾಡ ಜನ ಭೇಟಿಗೆ ಅವಕಾಶ ಕೇಳಿರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ಈ ಎಲ್ಲಾ ವಿಷಯದ ಬಗ್ಗೆ ಸರ್ವಪಕ್ಷ ಸಭೆ ಕರೆಯಲಾಗುತ್ತದೆ. ಕಾನೂನು ಸಲಹೆ ಪಡೆದು ಮುಂದುವರಿಯುವುದಾಗಿ ತಿಳಿಸಿದರು.