ಬೆಳಗಾವಿ : ಹೆತ್ತ ತಾಯಿಯೇ ಎರಡು ತಿಂಗಳ ಮಗುವನ್ನು ತಾಯಿ ಕೆರೆಗೆ ಎಸೆದ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ತಾಯಿ ಮಗುವನ್ನು ಕೆರೆಗೆ ಎಸೆಯುವುದನ್ನ ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗು ರಕ್ಷಣೆ ಮಾಡಿದ್ದಾರೆ. ಕಣಬರಗಿ ಗ್ರಾಮದ ನಿವಾಸಿ ಶಾಂತಾ ರಾಬರ್ಟ್ ಕರವಿನಕೊಪ್ಪ ಎಂಬುವವರು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ. ಮಗುವನ್ನು ಕೆರೆಗೆ ಎಸೆದು ಓಡಿ ಹೋಗುತ್ತಿದ್ದ ತಾಯಿಯನ್ನು ಕಂಡ ಸ್ಥಳೀಯರು ಕೆರೆಗೆ ಹಾರಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗುವನ್ನು ಬೆಳಗಾವಿ ನಗರದ ಚಿಕ್ಕ ಮಕ್ಕಳ ಖಾಸಗಿ ಆಸ್ಪತ್ರೆಗೆ ಮಗು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮೂರು ವರ್ಷದ ಹಿಂದೆ ಮದುವೆಯಾಗಿದ್ದ ಶಾಂತಾ ಗೃಹಿಣಿಯಾಗಿದ್ದಾಳೆ. ಗಂಡ ಕೆಲಸಕ್ಕೆ ಹೋಗಿದ್ದಾಗ ಮಗುವನ್ನ ಎತ್ತಿಕೊಂಡು ಕೆರೆಗೆ ಬಂದಿದ್ದಾರೆ. ಕೆಲ ಹೊತ್ತು ಅಲ್ಲಿಯೇ ಓಡಾಡಿದ್ದಾರೆ. ಬಳಿಕ ಮಗುವನ್ನು ಕೆರೆಗೆ ಎಸೆದು ಅಲ್ಲಿಂದ ಓಡಿದ್ದಾರೆ. ಇದನ್ನು ಗಮನಿಸಿದ ಅಲ್ಲಿದ್ದವರೊಬ್ಬರು ಜನರನ್ನು ಕೂಗಿ ಕರೆದಿದ್ದಾರೆ. ಸ್ಥಳೀಯರೊಬ್ಬರು ಕೂಡಲೇ ಕೆರೆಗೆ ಹಾರಿ ಮಗುವನ್ನ ರಕ್ಷಣೆ ಮಾಡಿದ್ದಾರೆ. ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಬಳಿಕ ಆಸ್ಪತ್ರೆಗೆ ಹೋಗಿ ಮಗುವಿನ ಆರೋಗ್ಯದ ಕುರಿತು ವಿಚಾರಿಸಿ ಅಲ್ಲಿಯೇ ತಾಯಿಯನ್ನು ಬಂಧಿಸಿದ್ದಾರೆ. ಮಗುವಿಗೆ ನಿರಂತರವಾಗಿ ಪಿಡ್ಸ್ ಬರುತ್ತಿದೆ. ಹಾಗೂ ಅಪಸ್ಮಾರವೂ ಇದೆ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದ ಕಾರಣ ಈ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ತಿಳಿಸಿದ್ದಾಳೆ ಎನ್ನಲಾಗಿದೆ.