ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಜನವರಿ 1ರಿಂದ ಮಾರ್ಚ್ 15ರವರೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತುಮೂಲ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜೋಗ ನಿರ್ವಹಣಾ ಪ್ರಾಧಿಕಾರದಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.