ಮುಂಬೈ : ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟಿದ್ದು, ಥಾಣೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ರಾತ್ರಿ ಅವರ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡುತ್ತಿರುವಾಗಲೇ ವೈದ್ಯರು ಅವರನ್ನು ತೀವ್ರ ನಿಗಾದಲ್ಲಿ ಇರಿಸಿದ್ದಾರೆ. ಕಾಂಬ್ಳಿ ಅವರು ಕುಡಿತ ಚಟಕ್ಕೆ ಸಂಬಂಧಿಸಿ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದಾರೆ.