ಅಹಮದಾಬಾದ್:
ಚುನಾವಣೆಗಳಲ್ಲಿ ಒಂದೇ ಕುಟುಂಬದಿಂದ ಹಲವರು ಸ್ಪರ್ಧೆಗಿಳಿಯುವುದು ಸಹಜ. ಅದರಲ್ಲೂ ನೇರಾನೇರ ಹಾಗೂ ವಿಭಿನ್ನ ರಾಜಕೀಯ ಪಕ್ಷಗಳಿಂದ ಸೆಣಸಾಡುವುದು ಕಂಡುಬರುತ್ತದೆ.
ಇದೀಗ
ಗುಜರಾತ್ ವಿಧಾನಸಭೆ ಚುನಾವಣೆ ಅಂತಹ ಮಹತ್ವದ ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ.
ಗುಜರಾತಿನ ಪ್ರತಿಷ್ಠಿತ ಜಾಮ್ ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಧರ್ಮಪತ್ನಿ ರಿವಾಬಾ ಸೋಲಂಕಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಪಕ್ಷದಿಂದ ರವೀಂದ್ರ ಜಡೇಜಾ ಅವರ ಸಹೋದರಿ ನೈನಾ ಕಣಕ್ಕಿಳಿಯುವ ಸಾಧ್ಯತೆ ಇದೆ. ರಿವಾಬಾ ಖ್ಯಾತ ಉದ್ಯಮಿ ಪುತ್ರಿ. 2019 ರಲ್ಲಿ ಬಿಜೆಪಿ ಸೇರಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದಾರೆ. ಜಾಮ್ ನಗರ ಪ್ರತಿನಿಸುತ್ತಿದ್ದ ಧರ್ಮೇಂದ್ರ ಸಿಂಗ್ ಕ್ರಿಯಾಶೀಲರಿಲ್ಲದೆ ಇರುವ ಹಿನ್ನೆಲೆಯಲ್ಲಿ ಈ ಬಾರಿ ಟಿಕೆಟ್ ವಂಚಿತರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರವೀಂದ್ರ ಜಡೇಜಾ ಅವರ ಧರ್ಮಪತ್ನಿ ರಿವಾಬಾ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ನೈನಾ ಅವರು ಜಾಮ್ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಆಗಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ಸಿಗಬಹುದು.