ಬೆಳಗಾವಿ: ಗಣೇಶ ಪುರ ಹಿಂದೂ ರಸ್ತೆಯಲ್ಲಿ ಶುಕ್ರವಾರ ನಸುಕಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ ನಡೆದಿದೆ.
ಪ್ರಫುಲ್ ಬಾಲಕೃಷ್ಣ ಪಾಟೀಲ (31)ಅವರು ಕಾರಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿದ್ದಾರೆ. ದಾಳಿಗೆ ಒಳಗಾದ ಪ್ರಫುಲ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅವರು ಹಲವು ವರ್ಷಗಳಿಂದ ಶಾಹು ನಗರದ ನಿವಾಸಿಯಾಗಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.