ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯ ಮಹಾಲಕ್ಷ್ಮಿ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 45 ಲಕ್ಷ ರೂ. ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ಮಂಗಳವಾರ ಭೂಮಿ ಪೂಜೆ ಕೈಗೊಂಡು ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರಾದ್ಯಂತ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಬಹುತೇಕ ರಸ್ತೆಗಳನ್ನು ಸುವ್ಯವಸ್ಥಿತಗೊಳಿಸಲಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲು ಜನತೆಯ ಸಹಕಾರ ಅಗತ್ಯ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಚಂದ್ರಶೇಖರ್, ಸೆಳ್ಕೆ, ಮಡಿವಾಳಪ್ಪ, ಮೋಹನ ಗಡಾದ, ಸಂಭಾಜಿ ಖೋತ್, ಚೌಗುಲೆ, ಮೋಹನ ಸಾಂಬ್ರೇಕರ, ಶ್ರೀಮತಿ ಹುಕ್ಕೇರಿ, ಆಪ್ತ ಸಹಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.