ಬೆಳಗಾವಿ : ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಅಂಗನವಾಡಿ ಶಿಕ್ಷಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಸುಮಾರು ಮೂರು ಭಾರಿ ಶಿಕ್ಷಕಿಯ ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ರಾಯಬಾಗ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಅಂಗನವಾಡಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಸಿದ್ರಾಯಿ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ.
ಅಂಗನವಾಡಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅದೇ ಅಂಗನವಾಡಿ ಆವರಣದಲ್ಲಿದ್ದ ಶಾಲೆಯಲ್ಲಿ ಸಿದ್ರಾಯಿ ಪತ್ನಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ಶಾಲೆಯ ಶಿಕ್ಷಕಿಗೆ ಅಂಗನವಾಡಿ ಶೌಚಾಲಯವನ್ನು ಅಡುಗೆ ಸಹಾಯಕಿಯಿಂದ ಸ್ವಚ್ಚಗೊಳಿಸುವಂತೆ ಸೂಚಿಸಿದ್ದಳು.
ಈ ಮಾತನ್ನು ಕೇಳಿಸಿಕೊಂಡಿದ್ದ ಸಿದ್ರಾಯಿ ಪತ್ನಿ ಈ ವಿಷಯವನ್ನು ತನ್ನ ಪತಿಗೆ ತಿಳಿಸಿದ್ದಳು. ಇದರಿಂದ ಸಿಟ್ಟಿಗೆದ್ದಿದ್ದ ಸಿದ್ರಾಯಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಲು ಆರಂಭ ಮಾಡಿದ್ದನು. ಶೌಚಾಲಯವನ್ನು ಸ್ವಚ್ಚಗೊಳಿಸುವ ವಿಚಾರಕ್ಕೆ ಇಬ್ಬರ ನಡುವೆ ಜಗಳವು ನಡೆದಿತ್ತು.
ಇದರಿಂದ ಸಿಟ್ಟಿಗೆದ್ದಿದ್ದ ಸಿದ್ರಾಯಿ ಇದನ್ನೆ ಬಂಡವಾಳ ಮಾಡಿಕೊಂಡು ಮೈಕೈ ಮುಟ್ಟಿ, ಆಕೆಯ ದೇಹದ ಭಾಗಗಳನ್ನು ಕೈಯಿಂದ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಘಟನೆ ಸಂಬಂಧ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.