ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಜನವರಿ 31 ಮತ್ತು ಫೆಬ್ರವರಿ 13ರ ನಡುವೆ ನಡೆಯಲಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ತಮ್ಮ ದಾಖಲೆಯ 8 ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಜ.31ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ. ಇನ್ನೂ ಬಜೆಟ್ ಅಧಿವೇಶನದ 2ನೇ ಭಾಗವು ಮಾರ್ಚ್ 10 ರಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.