ಬೆಂಗಳೂರು : ತಮ್ಮ ಸುಮಧುರ ಕಂಠದಿಂದ ಕನ್ನಡ ನಾಡಿನ ಜನರ ಮನ ಗೆದ್ದಿರುವ ಹನುಮಂತ ಅವರು ಇದೀಗ ಒಂದು ಅಚ್ಚರಿ ವಿಷಯವನ್ನು ತೆರೆದಿಟ್ಟಿದ್ದಾರೆ. ನಾನು ಬಿಗ್ ಬಾಸ್ ಟ್ರೋಫಿ ಗೆದ್ದರೆ ಅತ್ತೆ ಮನೆಗೆ ಹೋಗಿ ಹೆಣ್ಣು ಕೇಳುವೆ ಎಂದು ಹನುಮಂತ ಹೇಳಿದ್ದಾರೆ.
ಇಷ್ಟು ದಿನ ಚೆನ್ನಾಗಿ ಹಾಡಿದ್ದೇನೆ. ಒಂದು ವೇಳೆ ಔಟ್ ಆದರು ಖುಷಿಯಿಂದ ಹೊರಗೆ ಹೋಗುತ್ತೇನೆ. ಗೆದ್ದರೆ ನಮ್ಮ ಅತ್ತೆ ಮನೆಯ ಮುಂದೆ ಹೋಗಿ ನಿಲ್ಲುತ್ತೇನೆ. ಹುಡುಗಿ ಯಾಕೆ ಕೊಡಲ್ಲ ಅಂತ ಕೇಳುತ್ತೇನೆ ಎಂದು ಹೇಳಿದರು. ಅವರ ಆಸೆ ಈಡೇರುತ್ತದೋ ಇಲ್ಲವೋ ಎಂಬುದು ಕಾದು ನೋಡಬೇಕಾಗಿದೆ. ಕೆಲವು ವಾರಗಳ ಹಿಂದೆ ಬಿಗ್ ಬಾಸ್ ಮನೆಗೆ ಹನುಮಂತ ಅವರ ತಂದೆ-ತಾಯಿ ಬಂದಿದ್ದರು. ಆಗ ತಮ್ಮ ಸೊಸೆ ಹೇಗೆ ಇರಬೇಕು ಎಂದು ಹನುಮಂತ ಅವರ ತಾಯಿ ಹೇಳಿದ್ದನ್ನು ಇಲ್ಲಿ ನೆನಪಿಸಬಹುದು.