ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿ ಸಜ್ಜುಗೊಂಡಿದೆ. ‘ಗಾಂಧೀ ಭಾರತ’ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೇಶದ ನಾನಾ ಭಾಗಗಳಿಂದ ಕಾಂಗ್ರೆಸ್ ನಾಯಕರ ದಂಡೆ ಹರಿದುಬಂದಿದೆ. ಲೋಕಸಭೆ ವಿಪಕ್ಷ ನಾಯಕ, ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಸೇರಿ ದೊಡ್ಡ ನಾಯಕರೇ ದಂಡೇ ಮಂಗಳವಾರದ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾ ಅಧಿವೇಶನ ನಡೆದ ಶತಮಾನೋತ್ಸವ ಆಚರಿಸಲಾಗಿತ್ತು. ಆ ಸಂದರ್ಭದಲ್ಲಿ ಇಡೀ ದೇಶದ ಕಾಂಗ್ರೆಸ್ ನಾಯಕರು ಆಗಮಿಸಿದ್ದರು ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಗಾಂಧಿ ಭಾರತ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು. ಹೀಗಾಗಿ ಇಂದು ಕಾರ್ಯಕ್ರಮ ಮತ್ತೆ ಆಯೋಜಿತವಾಗುತ್ತಿದೆ.