ಬೆಳಗಾವಿ : ಬ್ರಹ್ಮ ವಿದ್ಯಾನಗರ ಮಧುರೆ, ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಇವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗಲೆಂದು ಆಶಿರ್ವದಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ್, ಉಪ್ಪಾರ ಸಮಾಜದ ಮುಖಂಡರಾದ ಬಸವರಾಜ ಆಯಟ್ಟಿ, ಭೀಮಶಿ ಹಂದಿಗುಂದ, ಕುಶಾಲ ಗುಡೆನ್ನವರ ಇನ್ನಿತರರು ಉಪಸ್ಥಿತರಿದ್ದರು.