ಚಿಕ್ಕೋಡಿ ಎಸಿ ಸುಭಾಷ್ ಸಂಪಗಾಂವಿಗೆ ಅತ್ಯುತ್ತಮ ಚುನಾವಣೆ ಕಾರ್ಯನಿರ್ವಾಹಕ ಪ್ರಶಸ್ತಿ ..!
ಬೆಳಗಾವಿ: ಅತ್ಯುತ್ತಮ ಚುನಾವಣೆ ಪದ್ದತಿಗಳೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾಂವಿ ಅವರಿಗೆ ಅತ್ಯುತ್ತಮ ಚುನಾವಣೆ ಪದ್ದತಿಗಳ ಸಹಾಯಕ ಚುನಾವಣಾಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2024-25 ನೇ ಸಾಲಿನ ನಡೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಯಚೂರಿನಲ್ಲಿ ಸಹಾಯಕ ಚುನಾವಣಾ ಅಧಿಕಾರಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿರುವುದನ್ನು ಚುನಾವಣಾ ಆಯೋಗ ಗುರುತಿಸಿದೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಅತ್ಯುತ್ತಮ ಚುನಾವಣೆ ಪದ್ದತಿಗಳ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜ. 25ರಂದು ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ.
ಸುಭಾಷ್ ಸಂಪಗಾಂವಿ ಅವರ ಸೇವೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ.