ಬೆಳಗಾವಿ: ಬೆಳಗಾವಿಯ ಅನಗೋಳ ಮುಖ್ಯ ರಸ್ತೆಯಲ್ಲಿರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಲ್ಲಿ ಆರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು ಮಾಲಕಿ ಅಂಜಲಿಯನ್ನು ವಶಕ್ಕೆ ಪಡೆಯಲಾಗಿದೆ.
ಸಂಕೇಶ್ವರ ಮತ್ತು ಕಾಕತಿಯ ಮಹಿಳೆ ಸೇರಿ ಅನಗೋಳದ ನಾಲ್ವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.