ಬೆಳಗಾವಿ: ನಗರದ ಖಾಸಗಿ ಹೋಟೆಲ್ನಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಿಬ್ಬಂದಿಗಳ ಸೌಹಾರ್ದ ಸಭೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ಜರುಗಿತು.
ಸಭೆಯಲ್ಲಿ ಉಪಸ್ಥಿತರಿದ್ದ ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಬ್ಯಾಂಕ್ ಸಿಬ್ಬಂದಿ ಯಾವುದೇ ರೀತಿಯ ಪ್ರಭಾವಕ್ಕೆ ಒಳಗಾಗದೆ ಸಮಯಕ್ಕೆ ಸರಿಯಾಗಿ ಸಾಲ ವಸೂಲಾತಿಗೆ ಮುಂದಾಗಬೇಕು ಎಂದು ಹೇಳಿದರು.
ಅಧ್ಯಕ್ಷ ಅಪ್ಪಾಸಾಹೇಬ ಕುಲಗೋಡೆ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಅಣ್ಣಾಸಾಹೇಬ ಜೊಲ್ಲೆ ಅವರು ತರಬೇತಿ ಕಾರ್ಯಕ್ರಮದ ಮಹತ್ವದ ಕುರಿತು ವಿವರಿಸಿದರು. ಶಾಸಕಿ ಶಶಿಕಲಾ ಜೊಲ್ಲೆ, ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ, ರಾಜೇಂದ್ರ ಅಂಕಲಗಿ, ಉಪಾಧ್ಯಕ್ಷರಾದ ಸುಭಾಷ ಢವಳೇಶ್ವರ, ಅರವಿಂದ ಪಾಟೀಲ, ಶ್ರೀಕಾಂತ ಢವನ, ಶಿವಾನಂದ ಡೋಣಿ, ಪಂಚನಗೌಡ ದ್ಯಾಮನಗೌಡರ, ನೀಲಕಂಠ ಕಪ್ಪಲಗುದ್ದಿಘಿ, ಕೃಷ್ಣಾ ಅನಗೋಳಕರ, ಗಜಾನನ, ರತ್ನಾ ಮಾಮನಿ, ಪ್ರವೀಣ ಢಾಳಿ ಇದ್ದರು. ಬ್ಯಾಂಕ್ನ ಸಿಇಒ ಸುರೇಶ ಅಳಗುಂಡಿ ಪ್ರಾಸ್ತಾವಿಕ ಮಾತನಾಡಿದರು. ಪ್ರಧಾನ ವ್ಯವಸ್ಥಾಪಕ ಎನ್.ಜಿ. ಕಲಾವಂತ ಸ್ವಾಗತಿಸಿದರು. ರಮೇಶ ಪಾಟೀಲ ನಿರೂಪಿಸಿದರು. ಉಪ ಪ್ರಧಾನ ವ್ಯವಸ್ಥಾಪಕ ಎಸ್. ಕಲ್ಮಠ ವಂದಿಸಿದರು. ಚಿತ್ರ- ಬಾಲ
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಿಬ್ಬಂದಿಗಳ ಸೌಹಾರ್ದ ಸಭೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು.