ಬೆಳಗಾವಿ : ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವಾ(31) ಎಂಬ ಬಾಣಂತಿ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜನವರಿ 31ರಂದು ಅವರಿಗೆ ಸಿಸೆರೀಯನ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಆರೋಗ್ಯವಾಗಿದ್ದರು. ಮಧ್ಯಾಹ್ನದ ನಂತರ ಆರೋಗ್ಯದಲ್ಲಿ ಏರುಪೇರು ಆಗಿದೆ. ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಸಾವಿನ ಬಗ್ಗೆ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.