ಬೆಂಗಳೂರು: ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಂಗಳವಾರ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಕಾರಿಗೆ ಗೂಡ್ಸ್ ಆಟೋವೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಟ್ರಾಫಿಕ್ ಜಾಮ್ ವೇಳೆ ಕಾರಿಗೆ ಗೂಡ್ಸ್ ಆಟೋ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರಿಗೆ ಗೂಡ್ಸ್ ಆಟೋ ಗುದ್ದಿದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಪರಿಶೀಲನೆ ನಡೆಸಿದರು. ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಂಗಳವಾರ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ದ್ರಾವಿಡ್ ಇಂಡಿಯನ್ ಎಕ್ಸ್ಪ್ರೆಸ್ ಸಿಗ್ನಲ್ ಕಡೆಯಿಂದ ಹೈಗ್ರೌಂಡ್ಸ್ ಕಡೆಗೆ ಹೊರಟಿದ್ದರು. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ವೇಳೆ ಟ್ರಾಫಿಕ್ನಲ್ಲಿ ದ್ರಾವಿಡ್ ಕಾರು ನಿಲ್ಲಿಸಿದ್ದರು. ಆಗ ಅವರ ಕಾರಿಗೆ ಹಿಂದಿನಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿಗೆ ಗೂಡ್ಸ್ ವಾಹನ ಗುದ್ದಿದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಕಾರನ್ನು ಪರಿಶೀಲಿಸಿದ್ದಾರೆ. ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ ಮಧ್ಯೆ ಸಣ್ಣ ವಾಗ್ವಾದ ಸಹ ನಡೆದಿದೆ. ಟ್ರಾಫಿಕ್ ಇದ್ದ ಕಾರಣ ದ್ರಾವಿಡ್ ಕಾರು ಮುಂದಿನ ವಾಹನಕ್ಕೆ ಟಚ್ ಆಗಿದೆ ಎನ್ನಲಾಗಿದೆ. ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಆದರೆ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.