ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 5ರ ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಬದ್ಧತೆಗೆ ಅನುಗುಣವಾಗಿ, ತೀರ್ಥಯಾತ್ರೆಯ ಸ್ಥಳಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಹೆಚ್ಚಿಸಲು ಪ್ರಧಾನಿ ಮೋದಿ ನಿರಂತರವಾಗಿ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಪ್ರಕಟಣೆ ಹೇಳಿದೆ.
ಭಾರತದ ಅಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಅವರ ಬದ್ಧತೆಗೆ ಅನುಗುಣವಾಗಿ, ಯಾತ್ರಾ ಸ್ಥಳಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಹೆಚ್ಚಿಸಲು ಪ್ರಧಾನಿ ಮೋದಿ ಸತತವಾಗಿ ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಪೌಷ ಪೂರ್ಣಿಮೆಯಂದು(ಜನವರಿ 13) ಪ್ರಾರಂಭವಾದ ಮಹಾ ಕುಂಭಮೇಳ 2025, ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮೇಳವಾಗಿದ್ದು, ಪ್ರಪಂಚದಾದ್ಯಂತದ ಭಕ್ತರನ್ನು ಆಕರ್ಷಿಸುತ್ತಿದೆ.
ಫೆಬ್ರವರಿ 26 ರ ಮಹಾಶಿವರಾತ್ರಿಯವರೆಗೆ ಈ ಮಹಾ ಕುಂಭ ನಡೆಯಲಿದೆ ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.