ನವದೆಹಲಿ : ಪರೀಕ್ಷೆಯ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮಕ್ಕೆ ಈ ಬಾರಿ ಹೊಸ ಆಯಾಮ ನೀಡಲಾಗಿದೆ.
ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸುವಾಗ ವಿವಿಧ ಕ್ಷೇತ್ರಗಳ ಏಳು ಸಾಧಕರು ಪರೀಕ್ಷೆಯ ಸಮಯದ ಒತ್ತಡ ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10 ರಂದು ದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿದ್ದು, ಇದರಲ್ಲಿ ಮೊದಲು ಕೇವಲ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು ಆದರೆ ಈಗ ಸೆಲೆಬ್ರಿಟಿಗಳು ಕೂಡ ಇದರ ಭಾಗವಾಗಿರಲಿದ್ದಾರೆ.
ಸದ್ಗುರು, ದೀಪಿಕಾ ಪಡುಕೋಣೆ, ಮೇರಿ ಕೋಮ್, ಅವನಿ ಲೇಖರಾ, ರುಜುತಾ ದಿವೇಕರ, ಸೋನಾಲಿ ಸಬರ್ವಾಲ್, ರೇವಂತ್ ಹಿಮತ್ಸಿಂಕಾ, ವಿಕ್ರಾಂತ ಮಾಸ್ಸೆ, ಭೂಮಿ ಪೆಡ್ನೇಕರ್ ಹಾಗೂ ಗೌರವ್ ಚೌಧರಿ ಪಾಲ್ಗೊಳ್ಳಲಿದ್ದಾರೆ.
ರಾಧಿಕಾ ಗುಪ್ತಾಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ಮೇರಿ ಕೋಮ್ ಮತ್ತು ಖ್ಯಾತ ಶೂಟರ್ ಅವನಿ ಲೇಖರಾ ಸಲಹೆಗಳನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ಸಂವಾದದಲ್ಲಿ ಇವರೆಲ್ಲ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಸಲಹೆ ನೀಡುತ್ತಾರೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ ಇತರ 50-60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಿಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸುತ್ತಿದ್ದಾರೆ.