ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಶುಕ್ರವಾರ ಬೆಳಗಿನ ಜಾವ ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಣಪುರ ಬಳಿ ಸಂಭವಿಸಿದ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಬೆಳಗಾವಿ ಗಣೇಶಪುರದ ನಾಲ್ವರು ನಿವಾಸಿಗಳ ಪೈಕಿ ಸಾಗರ ಮತ್ತು ನೀತಾ ಎಂಬವರು ಮೃತಪಟ್ಟಿದ್ದು, ಇನ್ನುಳಿದ ನಾಲ್ವರ ಹೆಸರು ಇನ್ನೂ ಖಚಿತ ಪಟ್ಟಿಲ್ಲ. ಇವರಲ್ಲಿ ಇಬ್ಬರು ಇಂದೋರ್ ನಿವಾಸಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬೆಳಗಾವಿಯ ನಾಲ್ವರು ಸೇರಿ ಹಾಗೂ ದ್ವಿಚಕ್ರ ವಾಹನದಲಿದ್ದ ಇಂದೋರ್ ನಿವಾಸಿಗಳು ಮೃತಪಟ್ಟಿದ್ದಾರೆ.
ಬೆಳಗಾವಿಯಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 19 ಜನರ ತಂಡದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಅಲ್ಲಿನ ಬಿಜೆಪಿ ಜಿಲ್ಲಾಧ್ಯಕ್ಷ ಮಿಶ್ರಾ ಅವರು ಗಾಯಾಳುಗಳ ಆರೈಕೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ.
16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಎಂ.ಜಿ.ಎಂ. ಆಸ್ಪತ್ರೆಯ ಅಧೀಕ್ಷಕ ಹಾಗೂ ಜಂಟಿ ನಿರ್ದೇಶಕ ಡಾ. ಅಶೋಕ ಯಾದವ್ ತಿಳಿಸಿದ್ದಾರೆ.