ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಎಂಟು ಗಂಟೆಗೆ ಆರಂಭವಾಗಲಿದೆ.
27 ವರ್ಷಗಳ ನಂತರ ಮತ್ತೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಹೆಚ್ಚಿನ ಸಮೀಕ್ಷೆಗಳು ಬಿಜೆಪಿ ಪರವಾಗಿ ಮೂಡಿರುವುದು ಗಮನಾರ್ಹ ಬೆಳವಣಿಗೆ. ಅರವಿಂದ ಕೇಜ್ರಿವಾಲಾ ಅವರ ಆಮ್ ಆದ್ಮಿ ಪಕ್ಷ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಅಧಿಕಾರ ಕಳೆದುಕೊಳ್ಳುವ ಲಕ್ಷಣಗಳು ಸಮೀಕ್ಷೆಯಲ್ಲಿ ಬಹಿರಂಗಗೊಂಡಿವೆ.