ಬೆಂಗಳೂರು : ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ. 72 ಗಂಟೆಯಲ್ಲಿ ಉತ್ತರಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ.
ಬಿಜೆಪಿಯಲ್ಲಿ ಕಳೆದ ಹಲವು ತಿಂಗಳಿನಿಂದ ನಡೆಯುತ್ತಿದ್ದ ಭಿನ್ನಮತೀಯ ಚಟುವಟಿಕೆಗಳಿಗೆ ಕೊನೆಗೂ ತಿರುವು ಸಿಕ್ಕಿದೆ. ಸೋಮವಾರ ಯತ್ನಾಳ್ ಗೆ ನೋಟೀಸ್ ಜಾರಿಗೊಳಿಸುವ ಮೂಲಕ ಬಿಜೆಪಿ ದಿಟ್ಟ ಹೆಜ್ಜೆ ಇಟ್ಟಿದೆ.