ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೋಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಫೆಬ್ರವರಿ 10 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01 ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರಾವೇಶಾತಿಯನ್ನು ಪ್ರಾರಂಭಿಸಲಾಗಿರುತ್ತದೆ. ಆಸಕ್ತ ವಿದ್ಯಾರ್ಥಿಗಳು www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ, ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳ್ಳಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ಅಥವಾ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-1, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು ಅಥವಾ ದೂರವಾಣಿ: ಸಂಖ್ಯೆ: 080-2600 3664 ಹಾಗೂ 9844965515 ಮೂಲಕ ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ, ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.