ಯಲ್ಲಾಪುರ : ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಕೆ.ಎಸ್.ಆರ್ಟಿ.ಸಿ ಬಸ್ ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು , ಗಂಭೀರ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿದ ಪರಿಣಾಮ 17 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಘಟನೆ ನಡೆದಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.