ಮುಂಬೈ: ಗವರ್ನರ್ ಸಂಜಯ್ ಮಲ್ಲೋತ್ರಾ ಅವರ ಸಹಿ ಇರುವ ರೂ.50 ಮುಖಬೆಲೆಯ ಹೊಸ ನೋಟುಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬುಧವಾರ ತಿಳಿಸಿದೆ.
ಗವರ್ನರ್ ಆಗಿದ್ದ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಪೂರ್ಣಗೊಂಡ ಬಳಿಕ ಕಳೆದ ವರ್ಷದ ಡಿಸೆಂಬರ್ನಲ್ಲಿ ಮಲ್ಹೋತ್ರಾ ಅಧಿಕಾರ ವಹಿಸಿಕೊಂಡಿದ್ದಾರೆ.
ಮಹಾತ್ಮ ಗಾಂಧಿ ಅವರ ಭಾವಚಿತ್ರ ಇರುವ ನೋಟುಗಳ ಸರಣಿಯಂತೆಯೇ ಈ ಹೊಸ ನೋಟುಗಳನ್ನು ವಿನ್ಯಾಸಗೊಳಿಸಲಾಗಿದೆ. ಹಳೆಯ ನೋಟುಗಳಿಗೆ ಅನ್ವಯಿಸುವ ನಿಯಮಾವಳಿಗಳು ಇವುಗಳಿಗೂ ಅನ್ವಯವಾಗಲಿವೆ ಎಂದು ತಿಳಿಸಿದೆ.