ಪ್ರಯಾಗ್ರಾಜ್ :
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಕೊನೆಯ ಘಟದತ್ತ ತಲುಪಿದೆ. ಫೆಬ್ರವರಿ 26 ರಂದು ಈ ವಿಶ್ವದ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ತೆರೆ ಬೀಳಲಿದೆ.
ಫೆಬ್ರವರಿ 25 ರ ರಾತ್ರಿ 8 ಗಂಟೆವರೆಗೆ ಪ್ರಯಾಗರಾಜ್ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ 1.24 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದರು. ಉತ್ತರ ಪ್ರದೇಶ ಮಾಹಿತಿ ಇಲಾಖೆಯ ಪ್ರಕಾರ, ಜನವರಿ 13 ರಿಂದ ಮಹಾಕುಂಭದಲ್ಲಿ ಸ್ನಾನ ಮಾಡಿದ ಒಟ್ಟು ಭಕ್ತರ ಸಂಖ್ಯೆ 63.36 ಕೋಟಿಯನ್ನು ಮೀರಿದೆ.
ಬುಧವಾರ ಮಹಾಶಿವರಾತ್ರಿಯ ಅಂತಿಮ ದಿನವಾಗಿದ್ದು, ಹೀಗಾಗಿ ಮಹಾಕುಂಭದಲ್ಲಿ ಭಾಗವಹಿಸಲು ಭಕ್ತರು ಪ್ರಯಾಗ್ರಾಜ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಮಂಗಳವಾರ ಸಂಜೆ 4 ಗಂಟೆಯಿಂದ ಮಹಾಕುಂಭ ಪ್ರದೇಶವನ್ನು ವಾಹನ ರಹಿತ ವಲಯವೆಂದು ಘೋಷಿಸಲಾಗಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.