ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಕುಟುಂಬಗಳಿಗೆ ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಲು ಪ್ರೋತ್ಸಾಹಿಸಿದ ಹಿನ್ನೆಲೆಯಲ್ಲಿ, ಪಕ್ಷದ ವಿಜಯನಗರದ ಲೋಕಸಭಾ ಸದಸ್ಯ ಕಲಿಸೆಟ್ಟಿ ಅಪ್ಪಲ ನಾಯ್ಡು ಅವರು ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ತಲಾ 50,000 ರೂ. ಬಹುಮಾನ ಘೋಷಿಸಿದ್ದಾರೆ…! ಅಲ್ಲದೆ, ಗಂಡು ಮಗುವಿಗೆ ಜನ್ಮ ನೀಡಿದರೆ ಮಹಿಳೆಗೆ ಹಸುವನ್ನು ಸಹ ನೀಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ…!!
ಅವರು ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಗೆ ನಗದು ಪ್ರೋತ್ಸಾಹಧನವನ್ನು ತಮ್ಮ ಸಂಬಳದಿಂದ ನೀಡುವುದಾಗಿ ತಿಳಿಸಿದ್ದಾರೆ. ವಿಜಯನಗರದ ರಾಜೀವ್ ಸ್ಪೋರ್ಟ್ಸ್ ಕಾಂಪೌಂಡ್ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಸಂಸದ ಅಪ್ಪಾಲ ನಾಯ್ದು ಈ ವಿಷಯ ಪ್ರಕಟಿಸಿದರು. ಅವರ ಆಫರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟಿಡಿಪಿ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪ್ರಕಟಣೆಯನ್ನು ಮರು ಪೋಸ್ಟ್ ಮಾಡುತ್ತಿದ್ದಾರೆ. ಆಫರ್ ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ನಾಯ್ಡು ಸಂಸದರನ್ನು ಶ್ಲಾಘಿಸಿದ್ದಾರೆ.
ಮಾರ್ಚ್ನಲ್ಲಿ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ದಕ್ಷಿಣ ಭಾರತದಲ್ಲಿ ಕ್ಷೀಣಿಸುತ್ತಿರುವ ಜನಸಂಖ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.ದಕ್ಷಿಣ ಭಾರತದ ರಾಜ್ಯಗಳಿಗೆ ಅದರ ವಯಸ್ಸಾದ ಜನಸಂಖ್ಯೆ ಸವಾಲುಗಳನ್ನು ಒಡ್ಡುತ್ತದೆ ಎಂದು ಹೇಳಿದರು.
“ಮಕ್ಕಳ ಸಂಖ್ಯೆ ಲೆಕ್ಕಿಸದೆ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಹೆರಿಗೆಯ ಸಮಯದಲ್ಲಿ ಹೆರಿಗೆ ರಜೆ ನೀಡಲಾಗುವುದು ಎಂದು ಚಂದ್ರಬಾಬು ನಾಯ್ಡು ಶನಿವಾರ ಘೋಷಿಸಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ವಿಷಯ ಪ್ರಕಟಿಸಿದರು.
“ಹಿಂದೆ, ಹೆರಿಗೆ ರಜೆಯನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಲಾಗಿತ್ತು. ಈಗ, ನಾವು ಎಲ್ಲಾ ಮಕ್ಕಳ ಹೆರಿಗೆಗೂ ಹೆರಿಗೆ ರಜೆಯನ್ನು ವಿಸ್ತರಿಸುತ್ತಿದ್ದೇವೆ ಎಂದು ಅವರು ಚಂದ್ರಬಾಬು ನಾಯ್ದು ಹೇಳಿದ್ದಾರೆ.