ದುಬೈ: ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಭಾರತ ತಂಡವು ಟ್ರೋಫಿ ಎತ್ತಿ ಹಿಡಿದಿದೆ. ಇದೂ ಸೇರಿ ಭಾರತವು ಈವರೆಗೆ 7 ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿದೆ. ಹಾಲಿ, ಮಾಜಿ ಕ್ರಿಕೆಟಿಗರು ಈ ಸಂಭ್ರಮವನ್ನು ತಮ್ಮದೇ ಶೈಲಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ.
1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಾಗ ಭಾರತ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮತ್ತು ತಂಡದ ನಾಯಕತ್ವ ವಹಿಸಿದ್ದ ಕಪಿಲ್ ದೇವ್ ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆ ಕುಣಿದು ತಮ. ಸಂತಸ ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ ಟ್ರೋಫಿ ಸ್ವೀಕರಿಸುತ್ತಿದ್ದಂತೆ ಇತ್ತ ಮೈದಾನದಲ್ಲಿ ನಿರೂಪಕಿ ಜೊತೆ ಚರ್ಚೆಯಲ್ಲಿ ತೊಡಗಿದ್ದ ಸುನಿಲ್ ಗಬಾಸ್ಕರ್ ಕುಣಿಯುತ್ತಿರುವ ದೃಶ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಲವರು ಹಂಚಿಕೊಂಡಿದ್ದಾರೆ.
ಇತ್ತ, ಟಿ.ವಿ ಲೈವ್ ಚರ್ಚೆಯಲ್ಲಿ ತೊಡಗಿದ್ದ ಕಪಿಲ್ ದೇವ್ ಸಹ ಕುಣಿದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಈವರೆಗೆ ಭಾರತ ತಂಡವು ಈ ವರೆಗೆ ಎರಡು ಏಕದಿನ ವಿಶ್ವಕಪ್, ಎರಡು ಟಿ20 ವಿಶ್ವಕಪ್, ಮೂರು ಚಾಂಪಿಯನ್ಸ್ ಟ್ರೋಫಿ ಸೇರಿ 7 ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿದೆ.
ಏಳು ಐಸಿಸಿ ಟ್ರೋಫಿ
* ಏಕದಿನ ವಿಶ್ವಕಪ್: 1983, 2011
* ಟೀ-20 ಅಂಕಗಳು: 2007, 2014
ಚಾಂಪಿಯನ್ಸ್ ಟ್ರೋಫಿ : 2002, 2013, 2025
ಮೋದಿ ಸಂತಸ : ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿ ಎತ್ತಿಹಿಡಿದ ಭಾರತ ತಂಡಕ್ಕೆ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿ, ಸಿನಿ ತಾರೆಯರು, ಮಾಜಿ ಕ್ರಿಕೆಟಿಗರು, ಪಾಕಿಸ್ತಾನದ ಕ್ರಿಕೆಟಿಗರು ಸಹ ಕೊಂಡಾಡಿದ್ದಾರೆ.
ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ! ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ಓಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಸರ್ವತೋಮುಖ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.