ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗಿದ್ದು, ಬಿಸಿಲಿನ ಬೇಗೆ ಕೊಂಚ ಕಡಿಮೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರ ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವೋತ್ತರ ಮಾರುತಗಳ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಮುಂಗಾರು ಮಳೆಯಾಗಿರುವ ಜಿಲ್ಲೆಗಳಲ್ಲಿ ತಾಪ ಸ್ವಲ್ಪ ಇಳಿಕೆಯಾಗಿದೆ. ಗುಡುಗು-ಸಿಡಿಲು ಸಹಿತ ಗಾಳಿ ಮಳೆಯಾಗುತ್ತಿದ್ದು, ಹಲವೆಡೆ ಮರ, ವಿದ್ಯುತ್ ಕಂಬಗಳು ಉರುಳಿವೆ. ಗುರುವಾರ ಮಂಗಳೂರು ವಿಮಾನ ನಿಲ್ದಾಣ(ಪಣಂಬೂರು)ದಲ್ಲಿ 40.4 ಮಿ.ಮೀ., ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ 27.5 ಮಿ.ಮೀ., ಮಂಗಳೂರಿನಲ್ಲಿ 16 ಮಿ.ಮೀ, ಚಾಮರಾಜನಗರ ಜಿಲ್ಲೆಯ ಹರದನಹಳ್ಳಿಯಲ್ಲಿ 8.5 ಮಿ.ಮೀ., ಹಾಸನದಲ್ಲಿ 7 ಮಿ.ಮೀ. ಹಾಗೂ ಮಂಡ್ಯದಲ್ಲಿ 2.5 ಮಿ.ಮೀ. ಮಳೆಯಾಗಿದೆ. ಅಲ್ಲದೆ, ಧರ್ಮಸ್ಥಳ, ಮಂಗಳೂರು, ಮಾಣಿ, ಸೋಮವಾರಪೇಟೆ, ಪುತ್ತೂರು, ಅಕರಗಲೋಡು, ಬೇಳೂರು, ಕಳಸ,