ಬೆಂಗಳೂರು : ಕರ್ನಾಟಕ ರಾಜ್ಯದ ಜನತೆಗೆ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡುವುದಾಗಿ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ಇದೀಗ ಮೂರನೇ ಬಾರಿಗೆ 4 ರೂಪಾಯಿ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಸಚಿವ ಸಂಪುಟ ನಡೆಸಿದ ಸಭೆ ನಡೆಸಿದ ನಂತರ ಕರ್ನಾಟಕ ಹಾಲು ಒಕ್ಕೂಟದ ಎಲ್ಲ ನಿಗಮಗಳಿಗೂ ಅನ್ವಯವಾಗುವಂತೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 4 ರೂ. ದರವನ್ನು ಹೆಚ್ಚಳ ಮಾಡುವುದಕ್ಕೆ ಅನುಮೋದನೆ ನೀಡಿದೆ. ಈ ಮೂಲಕ ಒಂದೆರಡು ದಿನಗಳಲ್ಲಿಯೇ ನಂದಿನಿ ಹಾಲಿನ ದರ ಹೆಚ್ಚಳ ಅನ್ವಯವಾಗಲಿದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಮ್ಮೆ ಬೆಲೆ ಏರಿಕೆ ಬರೆಯನ್ನು ಎಳೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು 3ನೇ ಬಾರಿಗೆ ಹಾಲಿನ ದರವನ್ನು ಹೆಚ್ಚಳ ಮಾಡಿದೆ.