ದಾವಣಗೆರೆ : ನ್ಯಾಮತಿಯ ಬ್ಯಾಂಕೊಂದರಲ್ಲಿ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಅಕ್ಟೋಬರ್ ತಿಂಗಳಲ್ಲಿ ಆರೋಪಿಗಳು ಬ್ಯಾಂಕ್ ದರೋಡೆ ಮಾಡಿದ್ದರು. ಆದರೆ ಯಾವುದೇ ಸುಳಿವು ಸಿಕ್ಕಿರಲಲಿಲ್ಲ. ಆರು ತಿಂಗಳ ಬಳಿಕ ಉಮಾ ಪ್ರಶಾಂತ ನೇತೃತ್ವದಲ್ಲಿನ ಪೊಲೀಸರ ತಂಡ ಪ್ರಕರಣವನ್ನು ಬೇಧಿಸಿದೆ. ಎಲ್ಲಾ ಆರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳು ಬ್ಯಾಂಕಿನಿಂದ ಕಳುವು ಮಾಡಿದ್ದ 17.750 ಕೆಜಿ ಚಿನ್ನಾಭರಣಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದು, ವಿಚಾರಣೆ ವೇಳೆ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.
ದರೋಡೆಗೆ ಕಾರಣ, ಸಂಚು ರೂಪಿಸಿರುವುದು ಎಲ್ಲವನ್ನೂ ಆರೋಪಿಗಳು ಬಾಯ್ಬಿಟ್ಟ ನಂತರ ಪೊಲೀಸರೇ ಶಾಕ್ ಆಗಿದ್ದಾರೆ.
ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯಕುಮಾರ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕಿನಲ್ಲಿ ಸಾಲ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದನಂತೆ, ಆದರೆ ಈತನ ಅರ್ಜಿ ತಿರಸ್ಕಾರವಾಗಿತ್ತು. ಇಇದರಿಂದ ಕೋಪಗೊಂಡಿದ್ದ ಆತ ಒಟಿಟಿ ಹಾಗೂ ಯು ಟ್ಯೂನ್ನಲ್ಲಿ ವೆಬ್ ಸೀರಿಸ್ ನೋಡಿದ ನಂತರ ಇದೇ ಬ್ಯಾಂಕ್ ದರೋಡೆಗೆ ಸಂಚು ರೂಪಿಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ.
ಆರೋಪಿಗಳು ಮೊಬೈಲ್, ವಾಹನ ಬಳಸದೆ, ಯಾವ ಸಾಕ್ಷ್ಯವನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್ನಲ್ಲಿ ಇಟ್ಟಿದ್ದರು. ಈ ಬಗ್ಗೆ ಸುಳಿವು ಸಿಕ್ಕ ಬಳಿಕ ಪೊಲೀಸ್ ತಂಡ ಅಲ್ಲಿಗೆ ತೆರಳಿ ಚಿನ್ನವನ್ನು ವಶಪಡಿಸಿಕೊಂಡಿದೆ.