ಬೆಳಗಾವಿ :
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ತಿಳಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧ ಬಳಿ ರಾಘವೇಂದ್ರ ಲೇಔಟ್ ನಲ್ಲಿ ಪಂಚಮಸಾಲಿ ಸಮಾಜದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು ಡಿಸೆಂಬರ್ 28 ರಂದು ಈ ಸಂಬಂಧ ಸರ್ವ ಪಕ್ಷ ಸಭೆ ನಡೆಸಲಾಗುತ್ತದೆ. ಡಿಸೆಂಬರ್ 29ರಂದು ಅಧಿಕೃತವಾಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.