ಬೆಳಗಾವಿ : ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ವಿಕಾಸದ ಜೊತೆಗೆ ಮಾನಸಿಕ ವಿಕಾಸವಾಗುತ್ತದೆ ಎಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕ ಡಿ.ಎಸ್. ಡಿಂಗ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಇಂದು ನಗರದ ಕೆ.ಎಲ್.ಇ ಸಂಸ್ಥೆಯ ಜಿ.ಎ. ಪ್ರೌಢಶಾಲೆಯ ೨ ದಿನಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಸ್ಪರ್ಧಾತ್ಮಕವಾಗಿ ಪಾಲ್ಗೊಂಡು ಸೋಲು ಗೆಲವನ್ನು ಸಮಾಂತರವಾಗಿ ಸ್ವೀಕರಿಸಿ ಭವ್ಯ ಭವಿಷ್ಯದತ್ತ ಹೆಜ್ಜೆ ಹಾಕಬೇಕೆಂದರು.
ಉಪ ಪ್ರಾಚಾರ್ಯ ಸಿದ್ಧರಾಮ ಗದಗ ಮಾತನಾಡಿ, ವಿದ್ಯಾರ್ಥಿಗಳು ಸದೃಢ ಮನಸ್ಸಿನೊಂದಿಗೆ ಕ್ರೀಡೆಯ ಮೂಲಕ ಸದೃಢ ದೇಹವನ್ನು ಕಾಪಾಡಿಕೊಳ್ಳಬೇಕು ಎಂದರು.
ವೇದಿಕೆಯ ಮೇಲೆ ಆಜೀವ ಸದಸ್ಯ ಮಹಾದೇವ ಬಳಿಗಾರ, ಪ್ರಾಚಾರ್ಯ ರವೀಂದ್ರ ಪಾಟೀಲ, ದೈಹಿಕ ಶಿಕ್ಷಕರಾದ ಪಿ.ಎಸ್. ನಿಡೋಣಿ ಕಾರ್ಯಕ್ರಮ ನಿರೂಪಿಸಿದರು. ಎಚ್.ಜಿ.ವೀರಗಂಟಿ ವಂದಿಸಿದರು.