ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ ಅವರ ಆತ್ಮಹತ್ಯೆಗೆ ಕಾರಣನಾದ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೊಬೈಲ್ ಸಂಖ್ಯೆ ಪರಿಶೀಲನೆ ಮಾಡಿದ ಪೊಲೀಸರಿಗೆ ಈಗ ಮುಖ್ಯ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.
ಗುಜರಾತ್ ನ ಸೂರತ್ ನಿವಾಸಿ ಚಿರಾಗ್ ಜೀವರಾಜಬಾಯ್ ಲಕ್ಕಡ್ ಬಂಧಿತನಾಗಿದ್ದೇನೆ.
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾದ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ (78)ಮಾರ್ಚ್ 27ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರೇವಿಯಾ ನಿದ್ರೆ ಮಾತ್ರೆ ಸೇವಿಸಿದ್ದರು. ಡಿಯಾಗೊ ಚಾಕುವಿನಿಂದ ತಮ್ಮ ಕುತ್ತಿಗೆಗೆ ಚುಚ್ಚಿ ಕೊಂಡು ಮನೆಯ ಹಿಂದಿನ ನೀರಿನ ತೊಟ್ಟಿಯಲ್ಲಿ ಮುಳುಗಿ ಮೃತಪಟ್ಟಿದ್ದರು.
ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬ ಪದೇಪದೇ ಬೆದರಿಕೆ ಹಾಕಿದ್ದ. ನನ್ನ ಸಿಮ್ ಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದ.
ಅನಿಲ್ ಯಾದವ್ ಎಂಬ ವ್ಯಕ್ತಿ ಕರೆ ಮಾಡಿ, ನಿಮ್ಮ ನಂಬರಿನಿಂದ ನನಗೆ ಬೆತ್ತಲೆ ಚಿತ್ರಗಳು, ಅಶ್ಲೀಲ ಸಂದೇಶಗಳು ರವಾನೆಯಾಗಿವೆ. ಇದರ ಬಗ್ಗೆ ಸೈಬರ್ ಸೆಲ್ಗೆ ದೂರು ನೀಡಿದ್ದಾಗಿ ಬೆದರಿಸುತ್ತಿದ್ದ ಎಂದು ಡಿಯಾಗೋ ಡೆತ್ನೋಟ್ ಬರೆದಿಟ್ಟಿದ್ದರು.
ಮೃತರ ಎಸ್ಬಿಐ ಖಾತೆಯಿಂದ ಬಾಲಾಜಿ ಇಂಡಸ್ಟ್ರೀಸ್ ಹೆಸರಿನಲ್ಲಿ ಐಡಿಎಫ್ಸಿ ಬ್ಯಾಂಕ್ ಖಾತೆಗೆ ಆನ್ಲೈನ್ ಮೂಲಕ ರೂ. 6.10 ಲಕ್ಷ ವರ್ಗಾವಣೆ ಮಾಡಿಸಿಕೊಂಡಿದ್ದ. ಇನ್ನೂ ಹೆಚ್ಚಿನ ಹಣಕ್ಕೆ ಪೀಡಿಸುತ್ತಿದ್ದ. ಈ ಖಾತೆಗೆ ಲಿಂಕ್ ಇದ್ದ ಮೊಬೈಲ್ ಸಂಖ್ಯೆಯನ್ನು ಬಳಸಿ ಹಣವನ್ನು ಬೇರೆಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದ ಎಂದು ಎಸ್ಪಿ ತಿಳಿಸಿದ್ದಾರೆ.
ಈ ಬಗ್ಗೆ ನಂದಗಡ ಪೊಲೀಸ್ ಠಾಣೆಯಲ್ಲಿ ಆರೋಪಿ 2 32/2025 0 66(2) ಕಾಯ್ದೆ ಮತ್ತು ಕಲಂ 108, 308(2), 319(2) ಸಹಕಲಂ 3(5) ಬಿಎನ್ಎಸ್ ಅಡಿ ಪ್ರಕರಣ ದಾಖಲಿಸಲಾಗಿತ್ತು.