ನವದೆಹಲಿ: ಕಾಶ್ಮೀರದ ಪಹಲ್ಲಾಮ್ನಲ್ಲಿ 26ಪ್ರವಾಸಿಗರನ್ನು ಗುಂಡಿಕ್ಕಿ ಹತ್ಯೆಗೈದ ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುವಲ್ಲಿ ದಾಳಿಯ ಮಾದರಿ, ಗುರಿ ಮತ್ತು ಸಮಯ ನಿರ್ಧರಿಸುವ ಸಂಪೂರ್ಣ ಸ್ವತಂತ್ರ ಸಶಸ್ತ್ರ ಪಡೆಗಳಿಗಿದೆ ಎಂದು ಸೇನಾ ಮುಖ್ಯಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಅಮಾಯಕ 26 ಪ್ರವಾಸಿಗರನ್ನು ಗುರಿಯಾಗಿಸಿ ಭಯೋತ್ಪಾದಕರು ನಡೆಸಿದ ದಾಳಿಯ ಹಾಗೂ ಮುಂದೆ ಕೈಗೊಳ್ಳಬೇಕಿರುವ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯನ್ನು ಎರಡನೇ ಬಾರಿ ನಡೆಸಿ ಅವರು ಮಾತನಾಡಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ (ಸಿಡಿಎಸ್) ಅನಿಲ್ ಚೌಹಾಣ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಮೋದಿ ಈ ಹೇಳಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸೇನೆಯ ಸಾಮರ್ಥ್ಯ ಕುರಿತು ಪ್ರಧಾನಿ ಮೋದಿ ಅವರು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉನ್ನತ ಮಟ್ಟದ ಸಭೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಮತ್ತಿತರರು ಭಾಗವಹಿಸಿದ್ದರು.